×
Ad

ಜೆಡಿಎಸ್‍ಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ

Update: 2024-06-13 00:06 IST

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿದ್ದು, ಇದರು ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಬೇಕಾಗಿದೆ. ಹಾಗಾಗಿ, ಶೀಘ್ರದಲ್ಲಿಯೇ ಪಕ್ಷಕ್ಕೆ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿರುವ ಕುಮಾರಸ್ವಾಮಿ, ಈ ಜವಾಬ್ದಾರಿ ನಿರ್ವಹಿಸುವ ಹಿನ್ನೆಲೆಯಲ್ಲಿ ಪಕ್ಷದ ಕಡೆಗೆ ಗಮನ ಕೊಡುವುದು ಕಷ್ಟ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಜವಾಬ್ದಾರಿಯನ್ನು ನಿಖಿಲ್ ಕುಮಾರಸ್ವಾಮಿಗೆ ಕೊಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಹಿರಿಯ ಶಾಸಕರಾದ ಎಚ್.ಡಿ.ರೇವಣ್ಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹಾಗೂ ವೆಂಕಟಶಿವಾರೆಡ್ಡಿ ಅವರ ಹೆಸರುಗಳು ಪ್ರಸ್ತಾಪವಾಗುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News