×
Ad

ಜೆಡಿಎಸ್ ಜೊತೆ ಮೈತ್ರಿಗೆ ಸಹಮತವಿಲ್ಲ: ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಸಮಾಧಾನ

Update: 2023-10-05 18:01 IST

ಬೆಂಗಳೂರು, ಅ. 5: ‘ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ’ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಇಪ್ಪತ್ತು ವರ್ಷದಿಂದ ನಾನು ಜೆಡಿಎಸ್‍ನೊಂದಿಗೆ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಕಾಂಗ್ರೆಸ್‍ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಇದೆ. ಯಾವತ್ತೂ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಮಾನಸಿಕ ಕಿರುಕುಳ ಹತ್ತಿರದಿಂದ ನೋಡಿದ್ದೇನೆ’ ಎಂದು ತಿಳಿಸಿದರು.

‘ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕೃತವಾದ ಬಳಿಕ ನಮ್ಮ ಮುಂದಿನ ನಿರ್ಧಾರ ಮಾಡುತ್ತೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಆ ಸಂದರ್ಭದಲ್ಲಿ ಒಂದು ಪಕ್ಷದ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಪರಸ್ಪರ ಮತ ಹಾಕಲಿಲ್ಲ. ಆದರೆ ಯಾರೂ ಈ ಬಗ್ಗೆ ವಯಕ್ತಿಕವಾಗಿ ಮಾತನಾಡಿಲ್ಲ’ ಎಂದು ಅವರು ತಿಳಿಸಿದರು.

‘ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಆ ಪಕ್ಷದ ರಾಜ್ಯಾಧ್ಯಕ್ಷರು ಏನು ಹೇಳ್ತಿದ್ದಾರೆ? ಯಾರೂ ನಾಲ್ಕು ಜನಕೂತು ಮಾತಾಡಿದರೆ ಅದು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನು ನಾನು ಹೇಳಿದ್ದಲ್ಲ. ನನ್ನ ಬಳಿ ಕೆಲವರು ಹೇಳಿದ್ದಾರೆ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಸೋಮಶೇಖರ್ ಇದೇ ವೇಳೆ ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News