×
Ad

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-11-14 14:13 IST

ಬೆಳಗಾವಿ: ರವಿವಾರ ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅವರಿಗೆ ಸಾಂತ್ವನ ಹೇಳಿದರು.

ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದ ಲಕ್ಷ್ಮೀ ಹೆಬ್ಬಾಳಕರ್, ನಿಮ್ಮೊಂದಿಗೆ ನಾವಿದ್ದೇವೆ. ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಧೈರ್ಯ ತುಂಬಿದರು.

ಘಟನೆ ನಡೆದ ತಕ್ಷಣ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದ ಸಚಿವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದರು.

ತನಿಖೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್, ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News