×
Ad

ಬೆಳಗಾವಿ ಅಧಿವೇಶನ: ಗದ್ದಲಕ್ಕೆ ಕಾರಣವಾದ ಝಮೀರ್ ರ 'ಸ್ಪೀಕರ್ ಸ್ಥಾನ'ದ ಹೇಳಿಕೆ: ಸದನ ಮುಂದೂಡಿಕೆ

Update: 2023-12-11 12:10 IST

ಬೆಳಗಾವಿ, ಡಿ.11: ತೆಲಂಗಾಣದಲ್ಲಿ ಚುನಾವಣೆ ಪ್ರಚಾರದ ವೇಳೆ ಸ್ಪೀಕರ್ ಸ್ಥಾನದ ಬಗ್ಗೆ ಸಚಿವ ಝಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆಯನ್ನು ಮುಂದಿಟ್ಟು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ವಿಧಾನಸಭೆಯನ್ನು ಸ್ಪೀಕರ್ ಮುಂದೂಡಿದ್ದಾರೆ.

6ನೇ ದಿನ ಬೆಳಗಾವಿ ಚಳಿಗಾಲ ಅಧಿವೇಶನದ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬಳಿಕ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಸ್ಪೀಕರ್ ಸ್ಥಾನಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಅಗೌರವ ತೋರಿದ್ದಾರೆ ಎಂದು ಆಕ್ಷೇಪಿಸಿ ಮಾತನಾಡಿದರು. ಈ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲಕ್ಕೆ ಇದು ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಸದನವನ್ನು ಮುಂದೂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News