×
Ad

ಧರ್ಮದ ಆಧಾರದ ಮೇಲೆ ಪೌರತ್ವ ಕೊಡುವುದಕ್ಕೆ ನಮ್ಮ ವಿರೋಧ ಇದೆ : ಸಿಎಂ ಸಿದ್ದರಾಮಯ್ಯ

Update: 2024-03-13 10:07 IST

ಬೆಂಗಳೂರು: ಧರ್ಮದ ಆಧಾರದ ಮೇಲೆ ಪೌರತ್ವ ಕೊಡುವುದಕ್ಕೆ ನಮ್ಮ ವಿರೋಧ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ  ಪ್ರತಿಕ್ರಿಯಿಸಿದ ಅವರು, ಚುನಾವಣೆ ಹತ್ತಿರ ಬಂದಿರುವುದರಿಂದ ಸಿಎಎ ಜಾರಿ ಮಾಡಿದ್ದಾರೆ. ಇಷ್ಟು ದಿನ ಯಾಕೆ ಸುಮ್ಮನಿದ್ರು? ಎಂದು ಪ್ರಶ್ನಿಸಿದರು.

Full View

ಪೌರತ್ವ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದೆ.

ಸದ್ಯದಲ್ಲೇ ಲೋಕಸಭಾ ಚುನಾವಣೆ ನಡೆಯಲಿದ್ದು, ಇಂತಹ ಹೊತ್ತಿನಲ್ಲಿ ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ಅನುಮತಿ ನೀಡಿರುವುದರಿಂದ ಕಾಯ್ದೆಯ ಸುತ್ತ ವಿವಾದ ಭುಗಿಲೆದ್ದಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News