ಯಶ್ ನಟನೆಯ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ : ಎಫ್‌ಐಆರ್ ದಾಖಲು
Update: 2024-11-12 13:36 IST
PC : x/thehindu.com
ಬೆಂಗಳೂರು: ಪೀಣ್ಯ ಬಳಿಯ ಎಚ್.ಎಂ.ಟಿ.ಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನಟ ಯಶ್ ನಟನೆಯ ʼಟಾಕ್ಸಿಕ್ʼ ಚಿತ್ರದ ಚಿತ್ರೀಕರಣಕ್ಕಾಗಿ ಮರಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.
ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‍ಗೆ ಮರಗಳನ್ನು ಕಡಿದ ಆರೋಪದ ಮೇಲೆ ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.
ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಎಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧವೂ ಮೊಕದ್ದಮೆ ದಾಖಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ ಎನ್ನುವ ಆರೋಪ ಈ ಹಿಂದೆ ಕೇಳಿಬಂದಿತ್ತು.