×
Ad

ಸ್ವಾತಂತ್ರ್ಯ ದಿನಾಚರಣೆ | ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರ ನೇಮಕ

Update: 2025-07-22 21:58 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಲಾಗಿದ್ದು, ತುಮಕೂರು ಜಿಲ್ಲೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಗದಗ ಜಿಲ್ಲೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರನ್ನು ನೇಮಿಸಲಾಗಿದೆ.

ಬೆಂಗಳೂರು ಗ್ರಾಮಾಂತರ-ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಬೆಂಗಳೂರು ದಕ್ಷಿಣ್ಲ-ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರು-ಇಂಧನ ಸಚಿವ ಕೆ.ಜೆ.ಜಾರ್ಜ್, ವಿಜಯಪುರ-ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ದಕ್ಷಿಣ ಕನ್ನಡ ಜಿಲ್ಲೆ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮೈಸೂರ್ಲು-ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬೆಳಗಾವಿ- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಳ್ಳಾರಿ-ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಲಬುರಗಿ-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಹಾವೇರಿ- ಜವಳಿ, ಕಬ್ಬು ಅಭಿವೃದ್ಧಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಧ್ವಜಾರೋಹಣ ಮಾಡಲಿದ್ದಾರೆ.

ವಿಜಯನಗರ-ವಸತಿ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಯಾದಗಿರಿ- ಸಣ್ಣ ಕೈಗಾರಿಕಾ ಸಚಿವ ಶರಣ ಬಸಪ್ಪ ದರ್ಶನಾಪುರ್, ಬೀದರ್-ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮಂಡ್ಯ-ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ದಾವಣಗೆರೆ- ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಧಾರವಾಡ-ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ರಾಯಚೂರು-ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಬಾಗಲಕೋಟೆ- ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಚಾಮರಾಜನಗರ- ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್, ಕೊಪ್ಪಳ- ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಚಿತ್ರದುರ್ಗ- ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಹಾಸನ-ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕೋಲಾರ-ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಉಡುಪಿ-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉತ್ತರ ಕನ್ನಡ-ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿವಮೊಗ್ಗ-ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಿಕ್ಕಬಳ್ಳಾಪುರ-ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕೊಡಗು- ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News