ದರ್ಶನ್ಗೆ ಜಾಮೀನು ನೀಡಿದ್ದಕ್ಕೆ ಸುಪ್ರೀಂ ಅಸಮಾಧಾನ : ನಟಿ ರಮ್ಯಾ ಪ್ರತಿಕ್ರಿಯಿಸಿದ್ದು ಹೀಗೆ...
Update: 2025-07-24 23:28 IST
ಬೆಂಗಳೂರು : ನಟ ದರ್ಶನ್ ಮತ್ತು ಇತರರಿಗೆ ನೀಡಿದ ಜಾಮೀನಿನ ಕುರಿತು, ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ನ ಕ್ರಮವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13, 2024ರಂದು ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು.
ಈ ಎಲ್ಲ ಬೆಳವಣಿಗಳ ಕುರಿತಂತೆ ನಟಿ ರಮ್ಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇಂದಿನ ವಿಚಾರಣೆ ಬಳಿಕ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.