×
Ad

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

Update: 2023-12-16 14:31 IST

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ 42 ವರ್ಷದ ಮಹಿಳೆಯನ್ನು ವಿವಸ್ತ್ರಗೊಳಿಸಿ, ಬೆತ್ತಲೆಯಾಗಿ ಮೆರವಣಿಗೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಕರ್ನಾಟಕ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

ಈ ಪ್ರಕರಣವು ʼಸ್ಟೀರಿಯೊಟೈಪ್ಡ್ ಪಿತೃಪ್ರಭುತ್ವದ ವಿಧಾನವನ್ನುʼ ತೋರುತ್ತಿದೆ, ಇದು ಸಂತ್ರಸ್ತೆಯ ಬದುಕುವ ಹಕ್ಕು ಮತ್ತು ಘನತೆಯ ಉಲ್ಲಂಘನೆಯ ಪ್ರಕರಣವಾಗಿಗೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಂತ್ರಸ್ತ ಮಹಿಳೆಯ ಪುತ್ರ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಹೊರಟಿದ್ದ ಹುಡುಗಿಯನ್ನು ಕರೆದುಕೊಂಡು ಊರು ಬಿಟ್ಟು ಓಡಿಹೋಗಿದ್ದ ಎಂದು ಆರೋಪಿಸಿ ಹುಡುಗಿಯ ಕುಟುಂಬಸ್ಥರು ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ್ದರು.

ಡಿಸೆಂಬರ್ 11 ರಂದು ನಡೆದ ಈ ಘಟನೆಯ ಬಗ್ಗೆ ಮಾಧ್ಯಮಗಳು ಮಾಡಿದ ವರದಿಯನ್ನು ಆಧರಿಸಿ ಎನ್‌ಎಚ್‌ಆರ್‌ಸಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದೆ.

ಸುದ್ದಿ ವರದಿಯ ವಿಷಯಗಳು ನಿಜವಾಗಿದ್ದರೆ, ಸಂತ್ರಸ್ತ ಮಹಿಳೆಯ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ಎತ್ತುತ್ತದೆ ಎಂದು ಆಯೋಗವು ಹೇಳಿದೆ. ಸಮಾಜದ ದುರ್ಬಲ ವರ್ಗಗಳನ್ನು, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ರಕ್ಷಿಸುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಅದು ಹೇಳಿದೆ.

ಅದರಂತೆ, ಆಯೋಗವು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News