×
Ad

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆ : ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Update: 2024-10-23 14:47 IST

ಬೆಂಗಳೂರು : "ಬಿಜೆಪಿಗೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ , ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿಯಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು, ಇದರಲ್ಲಿ ಆಶ್ಚರ್ಯ ಏನು ಇಲ್ಲ" ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬುಧವಾರ ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ʼಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಅಂದಿದ್ರು, ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದ್ರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕು. ನಿನ್ನೇ ಕುಮಾರಣ್ಣ ಅವರು ಇದನ್ನೇ ಹೇಳಿದ್ದಾರೆʼ ಎಂದರು.

ʼಅಂತಿಮವಾಗಿ ನಮ್ಮ ನಾಯಕರು ಮತ್ತು ಬಿಜೆಪಿ ನಾಯಕರು ಸೇರಿ ಚನ್ನಪಟ್ಟಣ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡುತ್ತಾರೆʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News