×
Ad

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು: ನಿಖಿಲ್ ಕುಮಾರಸ್ವಾಮಿ

Update: 2025-04-19 21:02 IST

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಜಾತಿ, ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು.

ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ ಎಂದು ಅವರು ಹೇಳಿದರು.

ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News