×
Ad

ಸಚಿವರ ವಿರುದ್ಧ ಯಾವುದೇ ಶಾಸಕರಿಂದ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Update: 2023-07-25 14:33 IST

ಹುಬ್ಬಳ್ಳಿ: ಸಚಿವರ ವಿರುದ್ಧ ಕಾಂಗ್ರೆಸ್‌ನ 30 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. 

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ಶಾಸಕರು ಯಾವುದೇ ಸಚಿವರ ವಿರುದ್ಧ ದೂರು ಕೊಟ್ಟಿಲ್ಲ. ಶಾಸಕಾಂಗ ಸಭೆ ಕರೀರಿ ಅಂದ್ದಿದಾರೆ' ಎಂದು ಅವರು ಸ್ಪಷ್ಟಪಡಿಸಿದರು. 

'ಗುರುವಾರ ಶಾಸಕಾಂಗ ಸಭೆ ಕರೆದಿದ್ದೇವೆ. ಕಳೆದ ವಾರ ಶಾಸಕಾಂಗ ಸಭೆ ಆಗಬೇಕಿತ್ತು.ಆದರೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದ ಕಾರಣ ಶಾಸಕಾಂಗ ಸಭೆ ಕರೆದಿರಲಿಲ್ಲ' ಎಂದು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News