ಹಿರಿಯೂರು ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ಆತುರ ಇಲ್ಲ: ಎಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ರೀತಿಯ ಆತುರ ಇಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದ ಉಪಚುನಾವಣೆ ನಡೆಯುತ್ತಯೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುಂದಷ್ಟೇ ನನ್ನ ಆದ್ಯತೆ ಎಂದು ತಿಳಿಸಿದರು.
ಪಾಪ.. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿರಿಯೂರು ಕ್ಷೇತ್ರದಲ್ಲಿ ಸಿಕ್ಕಾಪಟ್ಟೆ ಓಡಾಡುತ್ತಿದ್ದಾರೆ. ಆ ಕ್ಷೇತ್ರವನ್ನು ದತ್ತು ತೆಗೆದುಕೊಂಡು, ಕನಕಪುರ ಕ್ಷೇತ್ರದ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತಾರಂತೆ. ನೋಡೋಣ ಅವರು ಇನ್ನೂ ಏನೇನು ಮಾಡುತ್ತಾರೋ ಮಾಡಲಿ’ ಎಂದು ಕುಮಾರಸ್ವಾಮಿ ಟೀಕಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷ ಸಭೆ ಮಾಡುತ್ತೇವೆ. ಅಗತ್ಯವಿದ್ದರೆ ಬಿಜೆಪಿ ಜತೆ ಸಭೆ ಮಾಡುತ್ತೇವೆ. ಮತಾಂತರ ನಿಷೇಧ, ಗೋಹತ್ಯೆ ನಿಷೇಧ ಮಸೂದೆ ವಾಪಸ್ ವಿಚಾರಕ್ಕೆ ಸಂಬಂಧಿಸಿದ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
ಆಶಾಗಳಿಗೆ ಸ್ಪಂದಿಸಬೇಕು:
ಹಗಲು-ರಾತ್ರಿ ಎನ್ನದೇ ಚಳಿಯಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಪಾಪ.. ಹೂವಿನಂತಹ ಹೃದಯ ಹೊಂದಿರುವ ಸಿಎಂ ಆಶಾಗಳಿಗೆ ಸ್ಪಂದಿಸಬೇಕಿತ್ತು, ಅವರದ್ದು ಬಂಡೆಯಂತಹ ಹೃದಯ ಅಲ್ಲ ಅನ್ನೋದು ನಾನಾ ಭಾವನೆ. ಬಹುಶಃ ಟೋಕಿಯೋ ಪ್ರವಾಸದಿಂದ ವಾಪಸ್ ಬಂದ ಬಳಿಕ ಈ ಹೆಣ್ಣುಮಕ್ಕಳ ನೋವಿಗೆ ಸ್ಪಂದಿಸಬಹುದು ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.