×
Ad

ಶೆಟ್ಟರ್ ‌ಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Update: 2024-01-25 14:14 IST

ಮಡಿಕೇರಿ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರವೂ ಗೊತ್ತಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ವಿರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿ ವಂಚಿಸಿದೆ ಎಂದು ಹೇಳಿ ಅವರು ಕಾಂಗ್ರೆಸ್‌ಗೆ ಬಂದರು. ಪಕ್ಷವು ಅವರಿಗೆ ಟಿಕೆಟ್ ನೀಡಿತು. ಸ್ವ ಕ್ಷೇತ್ರದಲ್ಲೇ ಅವರು ಸೋತರು. ಆದರೂ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಯಿತು ಎಂದರು.

ಇತ್ತೀಚೆಗೆ ನನ್ನ ಬಳಿ ಮಾತನಾಡಿದ್ದಾಗಲೂ ಶೆಟ್ಟರ್ ಅವರು,  ʼಬಿಜೆಪಿ ನನಗೆ ಅನ್ಯಾಯ ಮಾಡಿದೆ. ವಾಪಸ್ ಆ ಪಕ್ಷಕ್ಕೆ ಹೋಗುವುದಿಲ್ಲʼ ಎಂದಿದ್ದರು ಎಂದು ಸಿಎಂ ನೆನೆಪಿಸಿಕೊಂಡರು.

 

 

  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News