×
Ad

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಸಿದ್ದರಾಮಯ್ಯ

Update: 2023-09-27 15:23 IST

ಚಾಮರಾಜನಗರ, ಸೆ.27: ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಕೋಣನಕೆರೆ ಸರಕಾರಿ ಬುಡಕಟ್ಟು ಆಶ್ರಮ ಶಾಲೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್, ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ಅನ್ನು ಏನೆಂದು ಕರೆಯಬೇಕು? ಜೆಡಿಎಸ್ ಜಾತ್ಯತೀತ ಎಂದು ಹೇಳಿಕೊಳ್ಳಬಾರದು ಎಂದರು.

2004ರಲ್ಲಿ ಸಿದ್ದರಾಮಯ್ಯ ಬಿಜೆಪಿಯ ವೆಂಕಯ್ಯ ನಾಯ್ಡುರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅಡ್ವಾಣಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://whatsapp.com/channel/0029VaA8ju86LwHn9OQpEq28  ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News