×
Ad

ಮುಡಾ ಪ್ರಕರಣಕ್ಕೆ ಸಂಬಂಧ ಈಡಿಯಿಂದ ನನಗೆ ಯಾವುದೆ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ

Update: 2024-10-03 18:47 IST

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಜಾರಿ ನಿರ್ದೇಶನಾಲಯ(ಈ.ಡಿ)ದಿಂದ ಯಾವುದೆ ನೋಟಿಸ್ ಬಂದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ಭೈರತಿ ಸುರೇಶ್‍ಗೆ ಮುಡಾ ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ಈಡಿಯವರು ನೋಟಿಸ್ ನೀಡಿದ್ದು, ದಸರಾ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News