×
Ad

ಗೃಹ ಲಕ್ಷ್ಮೀ ಯೋಜನೆಗೆ ಕಾಗದದ ಅರ್ಜಿಗಳು ಇಲ್ಲ; ನಕಲಿ ಅರ್ಜಿಗಳ ಬಗ್ಗೆ ಎಚ್ಚರ ಇರಲಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2023-07-18 22:42 IST

ಬೆಂಗಳೂರು: 'ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಇರುವುದಿಲ್ಲ. ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ' ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು. 

'ಗೊಂದಲವಿದ್ದರೆ 1902 ನಂಬರ್ ಕರೆ ಮಾಡಿ'

'ಗೃಹಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಸಂಖ್ಯೆಗೆ ಮೊಬೈಲ್ ಮೂಲಕ ಎಸ್‍ಎಂಎಸ್ ಮಾಡಬಹುದು. ಆನಂತರ, ಕೂಡಲೇ ಮನೆಯ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಎಸ್‍ಎಂಎಸ್ ಸಂದೇಶ ಹೋಗುತ್ತದೆ. ಈ ಬಗ್ಗೆ ಗೊಂದಲ ಉಂಟಾದರೆ, 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು. 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News