×
Ad

KRS ಒಳಹರಿವು ಶೂನ್ಯಕ್ಕೆ ತಲುಪಿದೆ; ತಮಿಳುನಾಡಿಗೆ ಹರಿಸಲು ನೀರಿಲ್ಲ: ಡಿ.ಕೆ.ಶಿವಕುಮಾರ್

Update: 2023-10-30 19:58 IST

ಬೆಂಗಳೂರು, ಅ.30: ಕೆಆರ್ ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಕೆಆರ್‍ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News