×
Ad

ಪರಿಷತ್‌ಗೆ ಉಮಾಶ್ರೀ, ಸೀತಾರಾಂ, ಸುಧಾಮ್‌ ದಾಸ್‌ ನಾಮನಿರ್ದೇಶನ: ಸರಕಾರದ ಶಿಫಾರಸ್ಸಿಗೆ ರಾಜ್ಯಪಾಲರ ಅನುಮೋದನೆ

Update: 2023-08-19 17:45 IST

ಬೆಂಗಳೂರು, ಆ.19: ಮಾಜಿ ಸಚಿವೆ, ನಟಿ ಉಮಾಶ್ರೀ ಸೇರಿದಂತೆ ಮೂವರು ವಿಧಾನಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನಗೊಂಡಿದ್ದು, ರಾಜ್ಯಪಾಲರ ಅಂಕಿತವೂ ಸಿಕ್ಕಿದೆ.

ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್‍ದಾಸ್ ಪರಿಷತ್ ಅವರನ್ನು ಕಾಂಗ್ರೆಸ್ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಿದ್ದು, ಈ ಸಂಬಂಧ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.

ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರನ್ನು ವಿಧಾನ ಪರಿಷತ್‍ಗೆ ನಾಮನಿರ್ದೇಶನ ಮಾಡುವ ಪ್ರಸ್ತಾವಕ್ಕೆ ಸರಕಾರದ ನಾಲ್ವರು ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಹೈಕಮಾಂಡ್‍ಗೆ ಪತ್ರ ಬರೆದಿದ್ದರು.ಆದರೂ, ಇವೆಲ್ಲವನ್ನೂ ಮೀರಿ ಪರಿಷತ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ, ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News