×
Ad

ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Update: 2023-09-23 20:08 IST

ಬೆಂಗಳೂರು, ಸೆ. 23: ‘ಪ್ರಜಾಪ್ರಭುತ್ವದಲ್ಲಿ ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ವಿಚಾರಕ್ಕೆ ಸಂಬಂಧಿಸಿದ ಹೋರಾಟಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆಂದು ಬಿಜೆಪಿ, ಜೆಡಿಎಸ್ ಪಕ್ಷ ಆರೋಪ ಸತ್ಯಕ್ಕೆ ದೂರ. ನಾವು ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News