×
Ad

ಸಿಎಂ ಬದಲಾವಣೆ ಕುರಿತ ಹೇಳಿಕೆ | ಶಾಸಕ ಬಸವರಾಜು ಶಿವಗಂಗಾಗೆ ನೋಟಿಸ್ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Update: 2025-08-16 18:29 IST

ಡಿ.ಕೆ.ಶಿವಕುಮಾರ್‌/ಬಸವರಾಜು ವಿ ಶಿವಗಂಗಾ

ಬೆಂಗಳೂರು, ಆ. 16: ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೆ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ಸಿಎಂ ಅಧಿಕಾರ ಬದಲಾವಣೆ ಕುರಿತು ಹೇಳಿಕೆ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News