×
Ad

ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಧಿಸೂಚನೆ : ಪ್ರಿಯಾಂಕ್ ಖರ್ಗೆ

Update: 2025-04-16 20:11 IST

ಪ್ರಿಯಾಂಕ್ ಖರ್ಗೆ 

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವರ್ಗಾವಣೆ ನಿಯಮಗಳ ನಿಯಮ 9ರ ಅನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಸಾಮಾನ್ಯವಾಗಿ ಕ್ಯಾಲೆಂಡರ್ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿದೆ ಎಂದು ಅವರು ಹೇಳಿದ್ದಾರೆ.

2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಎ.17 ರಿಂದ ಮೇ 13ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News