×
Ad

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

Update: 2024-02-27 21:44 IST

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಮಾ. 4ರಿಂದ ಎ.3ರವರೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದ್ದು, ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಎ.6 ಕೊನೆಯ ದಿನ ನಿಗದಿಪಡಿಸಲಾಗಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಮತ್ತು 18 ವರ್ಷಗಳು ತುಂಬಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳಿಗೆ (ಪ್ರವರ್ಗ 2ಎ, 2ಬಿ, 3ಎ, 3ಬಿ)  750 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News