ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ: ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಬೋಧನೆ
Update: 2026-08-09 18:39 IST
ಬೆಂಗಳೂರು : ಕರ್ನಾಟಕ ಹೈಕೋರ್ಟ್‍ನ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಂ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರವಿವಾರ ಇಲ್ಲಿನ ಲೋಕ ಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು, ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧನೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು ಸೇರಿದಂತೆ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸರಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.