×
Ad

ಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನಕ್ಕೆ ಆಕ್ಷೇಪ: ಪರಿಶೀಲಿಸುವಂತೆ ಸೂಚಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2023-08-05 21:29 IST

ಬೆಂಗಳೂರು, ಆ.5: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಶಿಫಾರಸು ಸಂಬಂಧ ಆಕ್ಷೇಪಣೆ ಕೇಳಿಬಂದ ಹಿನ್ನೆಲೆ ಸರಕಾರದ ಮುಖ್ಯ ಕಾರ್ಯದರ್ಶಿಗೆಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ಪಕ್ಷವೂ ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಮತ್ತು ಮನ್ಸೂರ್ ಅಲಿ ಖಾನ್ ನಾಮನಿರ್ದೇಶನ ಶಿಫಾರಸು ಮಾಡಲಾಗಿತ್ತು. ಆದರೆ, ಸುಧಾಮ್ ದಾಸ್, ಮನ್ಸೂರ್ ಅಲಿ ಖಾನ್ ಅವರನ್ನು ನಾಮನಿರ್ದೇಶನ ಮಾಡಬಾರದೆಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಜುಲೈ 29ಕ್ಕೆ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಹೀಗಾಗಿ, ಸರಕಾರದ ಮುಖ್ಯ ಕಾರ್ಯದರ್ಶಿಗೆಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ. ಇನ್ನೂ, ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ ಬಳಿಕ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರಿಗೆ ವಿವರಣೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News