ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆಗೆ ಹೈಕೋರ್ಟ್ ಚಾಟಿ
Update: 2024-02-16 21:03 IST
ಸಿದ್ದರಾಮಯ್ಯ/ ಅನಂತ ಕುಮಾರ್ ಹೆಗಡೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧ ತಮ್ಮ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿದ ಎಫ್‌ಐಆರ್ ರದ್ದು ಕೋರಿ ಅನಂತ ಕುಮಾರ್ ಹೆಗಡೆ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಅರ್ಜಿದಾರರ ಭಾಷೆ ಬಳಕೆಯ ಕುರಿತು ಕಿಡಿಕಾರಿದೆ.
ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಅವರಿಗೆ ಗೌರವ ನೀಡಬೇಕಾದದ್ದು ಅಗತ್ಯ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ. ಅವರ ಕಾರ್ಯ ನೀತಿ ನಿಮಗೆ ಇಷ್ಟವಾಗದೆ ಇರಬಹುದು ಆ ಕುರಿತು ಸರಿಯಾದ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಬಹುದು. ಕೀಳುಭಾಷೆ, ಪದಬಳಕೆಯ ಬಗ್ಗೆ ಎಚ್ಚರವಿರಲಿ ಎಂದು ಖಾರವಾಗಿ ಹೈಕೋರ್ಟ್ ಪ್ರತಿಕ್ರಿಯೆ ನೀಡಿದೆ.