×
Ad

ಅಶ್ಲೀಲ ವಿಡಿಯೋ ಪ್ರಕರಣ | ಪ್ರಜ್ವಲ್ ಬಳಿಕ ಎಚ್‌.ಡಿ.ರೇವಣ್ಣ ಮೇಲೂ ಎಫ್ಐಆರ್

Update: 2024-04-28 18:50 IST

ಹಾಸನ : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ ಎಫ್ಐಆರ್‌ ದಾಖಲಾಗಿದೆ.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆಯ ದೂರು ಆಧರಿಸಿ ಪೊಲೀಸರು ಎಚ್‌.ಡಿ.ರೇವಣ್ಣ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಚ್‌.ಡಿ.ರೇವಣ್ಣ ಎ.1, ಪ್ರಜ್ವಲ್ ರೇವಣ್ಣ ಎ.2 ಎಂದು ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ) ಕೇಸ್ ದಾಖಲಿಸಲಾಗಿದೆ.

ಭವಾನಿ ರೇವಣ್ಣ ಇಲ್ಲದ ಸಮಯದಲ್ಲಿ, ಕೊಠಡಿಯಲ್ಲಿದ್ದಾಗ ಎಚ್.ಡಿ ರೇವಣ್ಣ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಪ್ರಜ್ವಲ್ ರೇವಣ್ಣ ಕೂಡ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾರೆ. ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್‌ ಮಾಡಿದ್ದರು. ನಂತರ ಕೆಲಸ ಬಿಟ್ಟಿದ್ದೆ. ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಆತಂಕಗೊಂಡು ದೂರು ನೀಡಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News