×
Ad

ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹೀಂ ಅಧಿಕೃತ ಉಚ್ಚಾಟನೆ

Update: 2023-12-09 16:25 IST

ಬೆಂಗಳೂರು: ನಗರದ ಜೆ.ಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹೀಂ ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತವಾಗಿ ಘೋಷಣೆಯಾದಾಗಿನಿಂದಲೂ ಮಾಜಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹೀಂ ಪಕ್ಷದ ವಿರುದ್ಧ, ಪಕ್ಷದ ನಾಯಕರಾದ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಅಸಮಾಧಾನ ಹೊರಹಾಕುತ್ತಿದ್ದರು.

ಕೇರಳ ಜೆಡಿಎಸ್ ಸೇರಿದಂತೆ ವಿವಿಧ ರಾಜ್ಯಗಳ ಪದಾಧಿಕಾರಿಗಳ ಜೊತೆ ಪಕ್ಷಕ್ಕೆ ವಿರುದ್ಧವಾಗಿ ಸಭೆ ಮಾಡಿ , ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತರಾಗಿದ್ದರು. ಈ ಎಲ್ಲ ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನದೊಂದಿಗೆ ಇಬ್ರಾಹೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News