ಬೆಂಗಳೂರು: ಕೆ.ಷಡಕ್ಷರಿ, ಎನ್.ಎಚ್.ಕೋನರೆಡ್ಡಿ, ಪಿ.ಎಂ. ಅಶೋಕ್ ಸೇರಿದಂತೆ ಹನ್ನೊಂದು ಮಂದಿ ಶಾಸಕರಿಗೆ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ರಾಜ್ಯ ಸರಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಖನಿಜಗಳ ನಿಗಮ ಅಧ್ಯಕ್ಷರಾಗಿ ಕೆ.ಷಡಕ್ಷರಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ ಸ್ಥಾನಕ್ಕೆ ಪಿ.ಎಂ.ಅಶೋಕ್, ಬಿಎಂಟಿಸಿ-ಎ.ಆರ್.ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ-ಹಂಪನಗೌಡ ಬಾದರ್ಲಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ-ಡಿ.ಜಿ.ಶಾಂತನಗೌಡ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ-ಜಿ.ಎಚ್.ಶ್ರೀನಿವಾಸ್.

ಕೆಎಸ್ಸಾರ್ಟಿಸಿ-ಮಹಾಂತೇಶ್ ಕೌಜಲಗಿ, ಕರ್ನಾಟಕ ಕೃಷಿ ಬೆಲೆ ಆಯೋಗ-ಎನ್.ಎಚ್.ಕೋನರೆಡ್ಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ-ಬಸವನಗೌಡ ದದ್ದಲ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ-ಅಲ್ಲಮ ಪ್ರಭು ಪಾಟೀಲ್ ಅವರನ್ನು ಅಧ್ಯಕ್ಷರಾಗಿ ನೇಮಿಸಿ ತಕ್ಷಣದಿಂದ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor