×
Ad

ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

Update: 2023-09-06 00:02 IST

ರಾಮಚಂದ್ರ- ಮೃತ ವೃದ್ಧ 

ಸಾಗರ, ಸೆ.5: ವೃದ್ಧರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೋಗ ರಸ್ತೆಯಲ್ಲಿ ಮಂಗಳವಾರ ವರದಿಯಾಗಿದೆ.

ಸಾಗರದ ಗಜಾನನ ಸಾರಿಗೆ ಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ರಾಮಚಂದ್ರ (66) ಆತ್ಮಹತ್ಯೆಗೈದ ವೃದ್ಧ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದ ಇವರು ಮನೆಯ ಹಿಂದಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News