×
Ad

ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಇದೆ : ಸಿ.ಟಿ.ರವಿ

Update: 2024-12-07 20:04 IST

ಬೆಂಗಳೂರು: ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಶಾಸಕರಾಗಿದ್ದಾರೆ. ಆದ್ದರಿಂದ ಅವರಿಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳುವ ಅಧಿಕಾರ ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಇದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬೆಳವಣಿಗೆ ಮತ್ತು ಅವರ ನಡವಳಿಕೆ ಕುರಿತು ಕೋರ್ ಕಮಿಟಿ ಶಿಫಾರಸು ಮಾಡಬಹುದು ಎಂದು ತಿಳಿಸಿದರು. ಉಳಿದ ನಿರ್ಣಯವನ್ನು ಅವರೇ ತೆಗೆದುಕೊಳ್ಳಬೇಕು. ಹಾಗಾಗಿ ಶಿಫಾರಸು ಮಾಡುವ ಕೆಲಸವನ್ನು ಕೋರ್ ಕಮಿಟಿ ಮಾಡಬಹುದು ಎಂದರು.

ಗರ್ಭಿಣಿಯರು, ಶಿಶುಗಳ ಸರಣಿ ಸಾವು ; ಸರಕಾರಿ ಪ್ರಾಯೋಜಿತ ಕೊಲೆ :

ಬಳ್ಳಾರಿಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಆಗಿರುವ ಸಾವನ್ನು ಸರಕಾರಿ ಪ್ರಾಯೋಜಿತ ಕೊಲೆ ಎಂದೇ ಕರೆಯಬೇಕಾಗುತ್ತದೆ. ಆಸ್ಪತೆಗಳಲ್ಲಿ ಅಗತ್ಯ ಇರುವ ಔಷಧಿ ಸಿಗುತ್ತಿಲ್ಲ, ಸರಬರಾಜೇ ಮಾಡುತ್ತಿಲ್ಲ. ಏನು ಕಾರಣ ಎಂದು ಪ್ರಶ್ನಿಸಿದರು.

ಗರ್ಭಿಣಿಯರು ಮತ್ತು ಹಸುಳೆಗಳ ಸರಣಿ ಸಾವು ಸಂಭವಿಸುತ್ತಿದೆ. ಇದು ಸಾಮಾನ್ಯ ಸಂಗತಿಯಲ್ಲ. ಈ ಸಾವಿಗೆ ನೈತಿಕ ಹೊಣೆಯನ್ನು ಆಡಳಿತ ನಡೆಸುವ ಸರಕಾರವೇ ಹೊತ್ತುಕೊಳ್ಳಬೇಕು. ಇಲಾಖೆ ಸಚಿವರೇ ನೈತಿಕ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News