×
Ad

ಡಿ.ಕೆ.ಶಿವಕುಮಾರ್ ಸರಕಾರದಲ್ಲಿ ಒಬ್ಬರೇ ಡಿಸಿಎಂ?!

Update: 2026-06-02 19:33 IST

ಜಿ.ಪರಮೇಶ್ವರ್‌/ಡಿ.ಕೆ.ಶಿವಕುಮಾರ್‌

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಯ ಬೆನ್ನಲ್ಲೇ ಹೊಸ ಸರಕಾರ ರಚನೆಯ ಕಸರತ್ತು ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದು, ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಗರಿಗೆದರಿವೆ.

ಇದರ ನಡುವೆ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ನೂತನ ಸರಕಾರದಲ್ಲಿ 'ಒಬ್ಬರೇ ಉಪಮುಖ್ಯಮಂತ್ರಿ' ಇರಲಿದ್ದಾರೆ ಎನ್ನಲಾಗುತ್ತಿದ್ದು, ಆ ಸ್ಥಾನಕ್ಕೆ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಈ ಬಗ್ಗೆ ಇಂಡಿಯಾ ಟುಡೇ ಸೌತ್‌ ಬ್ಯೂರೊ ಮುಖ್ಯಸ್ಥ ನಾಗಾರ್ಜುನ ದ್ವಾರಕನಾಥ್ ಟ್ವೀಟ್‌ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವಾಗ ವಿವಿಧ ಸಮುದಾಯಗಳ ನಾಯಕರಿಗೆ 3 ರಿಂದ 4 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಒತ್ತಡ ಕೇಳಿಬಂದಿತ್ತು. ಆದರೆ, ಆಡಳಿತಾತ್ಮಕ ಹಿತದೃಷ್ಟಿ ಹಾಗೂ ಪಕ್ಷದ ಒಳಗಿನ ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ 'ಒಬ್ಬರೇ ಡಿಸಿಎಂ' ಸೂತ್ರಕ್ಕೆ ಮೊರೆ ಹೋಗಿದೆ ಎಂದು ತಿಳಿದು ಬಂದಿದೆ.

ಅಲ್ಲದೆ, ಡಿ.ಕೆ.ಶಿವಕುಮಾರ್ ಅವರ ಜೊತೆ 14 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News