ಎಸ್‍ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರವಷ್ಟೇ ನೋಡಿಕೊಳ್ಳಿ: ಮುರುಘಾಶ್ರೀಗೆ ಹೈಕೋರ್ಟ್ ಸೂಚನೆ
Update: 2024-01-10 18:47 IST
ಬೆಂಗಳೂರು: ‘ಚಿತ್ರದುರ್ಗದ ಎಸ್‍ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು’ ಎಂದು ವಿದ್ಯಾಪೀಠದ ಅಧ್ಯಕ್ಷರಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
ಫೋಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಮಠದ ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆ ಎಂದು ಆಕ್ಷೇಪಿಸಿ ವಿದ್ಯಾಪೀಠದ ಆಡಳಿತ ಮಂಡಳಿ ನಿರ್ದೇಶಕ ಆರ್.ನಾಗರಾಜ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಶರಣರ ಪರ ವಕೀಲರು, ಅವರು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು. ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆ ಮುಂದೂಡಿತು.