ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಾತ್ರವಲ್ಲ ಐಟಿ, ಸಿಬಿಐ, ಇಡಿ ವಿರುದ್ಧವೂ ಸೆಣಸಬೇಕಿದೆ: ಸಿದ್ದರಾಮಯ್ಯ

Update: 2024-02-02 05:54 GMT

Photo: facebook/siddaramaiah

ಬೆಂಗಳೂರು, ಫೆ.2: ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅವು ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿಯೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಮುಖ್ಯಮಂತ್ರಿ, ಬಿಜೆಪಿ ಸರಕಾರದ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News