ಚಳಿಗಾಲದ ಅಧಿವೇಶನ ಅವಧಿ ವಿಸ್ತರಿಸಲು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ
Update: 2025-12-15 14:05 IST
ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.8ರಿಂದ 19ರ ವರೆಗೆ ಹತ್ತು ದಿನಗಳ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಪೈಕಿ 2 ದಿನದ ಸಮಯವು ಮೊಟಕುಗೊಂಡಿದೆ. ಹೀಗಾಗಿ ಇನ್ನೂ ಒಂದು ವಾರ ಕಾಲ ಅಧಿವೇಶನವನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಆಗ್ರಹಿಸಿದ್ದಾರೆ.
ಸೋಮವಾರ ಈ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿರುವ ಆರ್.ಅಶೋಕ್, ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಳಷ್ಟು ವಿಷಯಗಳು ಬಾಕಿಯಿದ್ದು, ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಅಧಿವೇಶನವನ್ನು ಇನ್ನೂ ಐದು ದಿನಗಳ ಕಾಲ ವಿಸ್ತರಿಸಬೇಕೆಂದು ಆಗ್ರಹಿಸಿದ್ದಾರೆ.