×
Ad

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ

Update: 2024-03-28 21:57 IST

ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ಕೋರ್ಟ್ ಆದೇಶಿಸಿದೆ. ಹಿಂಡಲಗಾ ಬೆಳಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಸಭೆ ನಡೆಸಿದ ಆರೋಪಕ್ಕೆ ಕುರಿತು ಚುನಾವಣಾ ಅಧಿಕಾರಿ‌ ಮಹಾಂತೇಶ್ ಖಾಸಗಿ ದೂರು ದಾಖಲಿಸಿದ್ದರು.

ಈ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಜೆ.ಪ್ರೀತ್ ಆದೇಶಿಸಿದೆ. ಅಲ್ಲದೆ ಎ.30 ರಂದು ಕೋರ್ಟ್ ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News