×
Ad

ನಮ್ಮದು ಸಹಾಯ ಹಸ್ತ, ಆಪರೇಷನ್ ಹಸ್ತ ಅಲ್ಲ: ಡಿ.ಕೆ.ಶಿವಕುಮಾರ್

Update: 2023-09-09 00:31 IST

ಬೆಂಗಳೂರು, ಸೆ.8: ‘ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲದ ವಿರೋಧಿ. ನಾವು ಸಹಾಯ ಹಸ್ತವನ್ನೆ ನಂಬಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ಧಾಂತ, ಭಾರತ್ ಜೋಡೋ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ’ ಎಂದು ನುಡಿದರು.

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ. ನಾವು ಯಾರನ್ನು ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಲ್ಲರೂ ವಾಷಿಂಗ್ ಮೆಷಿನ್ ಸೇರಿಕೊಂಡು ಬಿಡಲಿಲ್ಲವೇ ಎಂದು ಅವರು ತಿಳಿಸಿದರು.

ಕಾವೇರಿ ನದಿ ನೀರು ಕುರಿತು ಪ್ರತಿಕ್ರಿಯಿಸಿ, ನಮ್ಮ ರೈತರ ಹಿತ ಕಾಯುವುದು ಮುಖ್ಯ, ಅದಕ್ಕೆ ನಾವು ಬದ್ಧ. ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News