×
Ad

ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ; ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ: ಕೆ.ಎಸ್ ಈಶ್ವರಪ್ಪ

Update: 2023-11-11 16:27 IST

ಶಿವಮೊಗ್ಗ: ''ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ. ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ'' ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ, ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ'' ಎಂದು ಹೇಳಿದರು. 

''ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎನ್ನುವುದು ಗೊತ್ತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಪಕ್ಷ ಎಲ್ಲಿದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದು ಚೂರಾಗಿದೆ'' ಎಂದು ಟೀಕಿಸಿದರು. 

ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡಲು ಕಾಂಗ್ರೆಸ್ ಗೆ ಅಧಿಕಾರ ಇದೆಯೇ? ನೆಹರೂ, ಇಂದಿರಾಗಾಂಧಿ, ಎಎಸಿಸಿ ಅಧ್ಯಕ್ಷರು ಕುಟುಂಬದವರು. ಎಲ್ಲೂ ವಿರೋಧವಿಲ್ಲ, ಬಿಜೆಪಿಯಲ್ಲಿ ಎಲ್ಲಾ ಒಟ್ಟಾಗಿದ್ದೇವೆ. ವಿಜಯೇಂದ್ರ ಅವರಿಂದ ಸಂಘಟನೆ ಬೆಳೆಯುತ್ತದೆ ಎಂದು ಇದೇ ವೇಳೆ ಹೇಳಿದರು. 

ಇದನ್ನೂ ಓದಿ >>> ನ್ನ ಮಗ ಕಾಂತೇಶ ಹಾವೇರಿ ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್. ಈಶ್ವರಪ್ಪ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News