×
Ad

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ

Update: 2024-02-19 21:30 IST

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2024 ವಿಧಾನಸಭೆಯಲ್ಲಿ ಅಂಗೀಕರ ಪಡೆಯಿತು.

ಸೋಮವಾರ ವಿಧಾನಸಭೆ ಕಲಾಪದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ 2024ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿ, ಗ್ರಾಮ ಪಂಚಾಯಿತಿಗಳ ಭೌಗೋಳಿಕ ವಿಸ್ತೀರ್ಣ ಸಂಬಂಧ ಅನುಕೂಲವಾಗುವ ತಿದ್ದುಪಡಿ ಇದಾಗಿದೆ ಎಂದರು.

ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ.

ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993 ಅನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ ಎಂದು ವಿವರಿಸಿದರು.

ಆನಂತರ ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಹಲವು ಸದಸ್ಯರು ತಿದ್ದುಪಡಿ ವಿಧೇಯಕ ಸ್ವಾಗತಿಸಿದರು. ಬಳಿಕ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News