ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ)ವಿಧೇಯಕ ಅಂಗೀಕಾರ
Update: 2024-02-19 21:16 IST
ಬೆಂಗಳೂರು: ಮಾಧ್ಯಮಿಕ, ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಮಂಡಳಿಯಲ್ಲಿ ಪ್ರಾತಿನಿಧ್ಯ ಹೊಂದಿರದ ವರ್ಗದ ಅಥವಾ ಸಮುದಾಯದ ಜನರಿಗೆ ನಾಮ ನಿರ್ದೇಶನ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸುವ 2024ನೆ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.