×
Ad

ಪಾವಗಡ: ದಂಪತಿ ಆತ್ಮಹತ್ಯೆ

Update: 2023-10-06 16:54 IST

ಮೃತ ದಂಪತಿ

ಪಾವಗಡ (ತುಮಕೂರು) : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಪಿ. ರೊಪ್ಪ ಗ್ರಾಮದಲ್ಲಿ ವರದಿಯಾಗಿದೆ.

ಪಿ. ರೊಪ್ಪ ಗ್ರಾಮದ ಮನು (27), ಪವಿತ್ರ (24) ಮೃತ ದಂಪತಿ ಎಂದು ಗುರುತಿಸಲಾಗಿದೆ. 

ತಾಲೂಕಿನ ಪಿ.ರೊಪ್ಪ ಗ್ರಾಮದ ಮನೆಯಲ್ಲಿ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ.

ಮೃತರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಲೂಕಿನ ಪಾಲಕುಂಟೆಯ ಪವಿತ್ರ, ಮನು ಅವರ ವಿವಾಹ ಮೂರು ವರ್ಷಗಳ ಹಿಂದೆ ನಡೆದಿತ್ತು. ಮೃತರಿಗೆ ಸುಮಾರು ಎರಡು ವರ್ಷದ ಹೆಣ್ಣು ಮಗು ಇದೆ. ಮಗುವನ್ನು ಪವಿತ್ರ ಅವರ ತವರು ಮನೆಯಲ್ಲಿ ಬಿಡಲಾಗಿತ್ತು ಎಂದು ಹೇಳಲಾಗಿದೆ.

ಶುಕ್ರವಾರ ಬೆಳಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರು ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ವಿಚಾರ ತಿಳಿದಿದೆ.

'ಟೊಮೆಟೊ ಸೇರಿದಂತೆ ವಿವಿಧ ಬೆಳೆಗಳಲ್ಲಿ ನಷ್ಟವಾಗಿತ್ತು. ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಕುಟುಂಬಸ್ಥರು ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News