×
Ad

ಪಾವಗಡ | ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿ: ಜಾತ್ರೋತ್ಸವದಿಂದ ಹಿಂದಿರುಗುತ್ತಿದ್ದ ಮೂವರು ಮೃತ್ಯು

Update: 2023-09-27 12:05 IST

ಪಾವಗಡ, ಸೆ.27: ಎರಡು ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಎಚ್.ಪಿ.ಪೆಟ್ರೋಲ್ ಬಂಕ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

ಮೃತರನ್ನು ಕೋಟಬಂಡೆ ಗ್ರಾಮದ ಈಶ್ವರಪ್ಪ(36), ನಾಗರಾಜಪ್ಪ (42) ಹಾಗೂ ಚಿಕ್ಕತಿಮ್ಮನಹಟ್ಟಿ ನಿವಾಸಿ ದರ್ಶನ್ ಎಂದು ಗುರುತಿಸಲಾಗಿದೆ.

ಬೈಕ್ ಸವಾರರು ಮಂಗಳವಾಡ, ಕೆರೆಕ್ಯಾತನಹಳ್ಳಿ, ಕೆಂಚಮ್ಮನಪಾಳ್ಯ, ವಿ ಎಚ್ ಪಾಳ್ಯ, ಗ್ರಾಮಗಳಲ್ಲಿ ನಡೆದ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಈ ಸಂಬಂಧ ಅರಸೀಕೆರೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

-----------------------------

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://whatsapp.com/channel/0029VaA8ju86LwHn9OQpEq28

ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News