×
Ad

ಆನ್‌ಲೈನ್ ಬೆಟ್ಟಿಂಗ್ ನಿಷೇಧ ಪ್ರಶ್ನಿಸಿದ ಅರ್ಜಿ : ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2025-08-30 11:39 IST

ಕರ್ನಾಟಕ ಹೈಕೋರ್ಟ್‌ (PTI)

ಬೆಂಗಳೂರು : ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳ ನಿಷೇಧಕ್ಕಾಗಿ ಕೇಂದ್ರ ಸರಕಾರ ರೂಪಿಸಿರುವ 'ಆನ್‌ಲೈನ್‌ ಗೇಮಿಂಗ್‌ (ಉತ್ತೇಜನ ಮತ್ತು ನಿಯಂತ್ರಣ) ಕಾಯ್ದೆ'ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ನವದೆಹಲಿಯಲ್ಲಿ ನೋಂದಾಯಿತ ಕಚೇರಿ ಹೊಂದಿರುವ 'ಹೆಡ್‌ ಡಿಜಿಟಲ್‌ ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌' ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲ ಆರ್ಯಂ ಸುಂದರಮ್ ಹಾಗೂ ಕೇಂದ್ರ ಸರಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ವಿದ್ಯುನ್ಮಾನ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.

ಕಾಯ್ದೆಯ ಸೆಕ್ಷನ್‌ಗಳಾದ 2(1)(G), 5, 6, 7 ಮತ್ತು 9ಕ್ಕೆ ತಡೆ ನೀಡಬೇಕು. ಅರ್ಜಿದಾರರ ವಿರುದ್ಧ ಯಾವುದೇ ದಂಡನೀಯ ಕ್ರಮಕೈಗೊಳ್ಳದಂತೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಗೆ ಸಂಬಂಧಿಸಿದಂತೆ ಅರ್ಜಿಯ ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News