×
Ad

ಪಿಜಿ ವೈದ್ಯಕೀಯ: ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಅ.17 ಕೊನೆಯ ದಿನ

Update: 2025-10-14 20:57 IST

ಬೆಂಗಳೂರು, ಅ.14: ನೀಟ್ ಪಿಜಿ-2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ ವೈದ್ಯಕೀಯ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.17ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.

ಇನ್ನು ಯುಜಿಸಿಇಟಿ 2025ರ ಬಿ.ಎಸ್ಸಿ. ನರ್ಸಿಂಗ್‌, ಬಿ-ಫಾರ್ಮ, ಫಾರ್ಮ-ಡಿ ಮತ್ತು ಬಿಪಿಟಿ ಕೋರ್ಸುಗಳಿಗೆ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ(ಕನ್ಫರ್ಮೇಷನ್ ಸ್ಲಿಪ್) ಡೌನ್ ಲೋಡ್ ಮಾಡಿಕೊಂಡು ಅ.16ರ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಅಭ್ಯರ್ಥಿಗಳು ಅ.16ರ ಸಂಜೆ 4ರೊಳಗೆ ಶುಲ್ಕ ಪಾವತಿಸಿ, ಸಂಜೆ 5ರೊಳಗೆ ಕನ್ಫರ್ಮೇಷನ್ ಸ್ಲಿಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News