ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವವರಿಗೆ ಡಿ.1ರವರೆಗೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶುಲ್ಕ ಪಾವತಿ ನಂತರ ಕೆಇಎ ಕಚೇರಿಯಲ್ಲಿ ಡಿ.1ರಂದು ಸಂಜೆ 4ಗಂಟೆವರೆಗೆ ದಾಖಲೆ ಸಲ್ಲಿಸಬಹುದು. ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಡಿ.2ರವರೆಗೆ ಅವಕಾಶ ನೀಡಲಾಗಿದೆ. ಈ ಸುತ್ತಿನಲ್ಲಿ 3,532 ಮಂದಿಗೆ ಸೀಟು ಹಂಚಿಕೆಯಾಗಿದೆ ಎಂದು ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿ

contributor

ಮಾಳಿಂಗರಾಯ ಕೆಂಭಾವಿ ಅವರು ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ, ಐಚ್ಛಿಕ ಕನ್ನಡ, ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿ ಹಾಗೂ ಪತ್ರಿಕೋದ್ಯಮ ಡಿಪ್ಲೊಮಾ ಪಡೆದಿದ್ದು, ವಾರ್ತಾಭಾರತಿ ಕನ್ನಡ ದೈನಿಕದಲ್ಲಿ 2023ರಿಂದ ಉಪಸಂಪಾದಕ, ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ಸಿನೆಮಾ ವಿಮರ್ಶೆ ಬರೆಯುವುದು ಇವರ ಹವ್ಯಾಸವಾಗಿದೆ.