×
Ad

ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ: ಬಸವರಾಜ ಬೊಮ್ಮಾಯಿ

Update: 2023-06-25 19:34 IST

ಬೆಳಗಾವಿ, ಜೂ.25: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಲ್ಲಲ್ಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ರವಿವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪಟ್ನಾದಲ್ಲಿ ನಡೆದ ತೃತೀಯ ರಂಗದ ನಾಯಕರ ಸಭೆಯಲ್ಲಿ ದೇಶದ ಉದ್ಧಾರ ಬಗ್ಗೆ ಚರ್ಚೆ ಆಗಿಲ್ಲ.ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೇಗೆ ಸೋಲಿಸಬೇಕೆಂದು ಚರ್ಚಿಸಲಾಗಿದೆ. ಜತೆಗೆ, ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದು ಟೀಕಿಸಿದರು.

ರಾಜೀ ಇಲ್ಲ: ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಯಾರ ಜೊತೆಗೂ ನಾನು ರಾಜೀ ಮಾಡಿಕೊಂಡು ರಾಜಕಾರಣ ಮಾಡಿಲ್ಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆ. ಕಾಂಗ್ರೆಸ್ ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ ಎಂದು ಹೇಳಿದರು.

ಬಿಜೆಪಿಯೇ ನನ್ನ ತಂದೆ-ತಾಯಿ, ಬಿಜೆಪಿ ಕಾರ್ಯಕರ್ತರು ನನ್ನ ಸಹೋದರ-ಸಹೋದರಿಯರು. ನಾನು ಮುಖ್ಯಮಂತ್ರಿ ಆಗಿದ್ದಾಗ ಪಕ್ಷ, ಕಾರ್ಯಕರ್ತರ ಆಶಯದಂತೆ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇನೆ. ಮುಖ್ಯಮಂತ್ರಿ ಆಗಿದ್ದಾಗ ಕಾರ್ಯಕರ್ತರ ಹಿತ ಕಾದಿದ್ದೇನೆ, ಮುಂದೆಯೂ ಕಾರ್ಯಕರ್ತರ ಹಿತ ಕಾಯುವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News