ನ.15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಡಿ.ಕೆ.ಶಿವಕುಮಾರ್
ನರೇಂದ್ರ ಮೋದಿ |Photo Credit : PTI
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 15ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಪ್ರಧಾನಿಗಳು ಆಗಮಿಸಲಿದ್ದು, ಪಿಂಕ್ ಮೆಟ್ರೋ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ರಾಜ್ಯ ಸರಕಾರವು ಬರ ಪರಿಹಾರ ನಿಧಿ ಬಿಡುಗಡೆ ಕುರಿತು ಪ್ರಧಾನಿಯವರೊಂದಿಗೆ ಚರ್ಚಿಸಲು ಸರ್ವಪಕ್ಷ ನಿಯೋಗದ ಭೇಟಿಗೆ ಸಮಯಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.