ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಪಿ.ಎಂ. ನರೇಂದ್ರಸ್ವಾಮಿ ನೇಮಕ
Update: 2025-02-05 22:59 IST
ಪಿ.ಎಂ.ನರೇಂದ್ರಸ್ವಾಮಿ
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ 'ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ'ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿದಿದೆ.
ಬುಧವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್. ಪ್ರವೀಣ್ ಅವರು ಮೇಲ್ಕಂಡ ಸ್ಥಾನಕ್ಕೆ ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿದ್ದಾರೆ.