×
Ad

ಪೋಕ್ಸೋ ಪ್ರಕರಣ | ಬಿ.ಎಸ್‌.ಯಡಿಯೂರಪ್ಪ ಅರ್ಜಿ ವಿಚಾರಣೆಯನ್ನು ಜುಲೈ.26ಕ್ಕೆ ಮುಂದೂಡಿದ ಹೈಕೋರ್ಟ್

Update: 2024-07-12 17:20 IST
  • ಯಡಿಯೂರಪ್ಪ | PTI 

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ.26ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ಅಲ್ಲಿಯವರೆಗೆ ಖುದ್ದು ಹಾಜರಾತಿಯಿಂದ ಬಿ.ಎಸ್.​ಯಡಿಯೂರಪ್ಪಗೆ ವಿನಾಯಿತಿ ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ನೀಡಲಾಗಿದೆ. ಇತರೆ ಆರೋಪಿಗಳಿಗೂ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದ್ದು, ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ.

ಜುಲೈ.15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News