×
Ad

ಪೋಕ್ಸೋ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಕೋರ್ಟ್​ನಿಂದ ಸಮನ್ಸ್ ಜಾರಿ

Update: 2025-02-28 13:03 IST

ಯಡಿಯೂರಪ್ಪ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಸಂಬಂಧ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಚಾರ್ಚ್‌ಶೀಟ್ ಮೇಲಿನ ವಿಚಾರಣೆಗೆ ಸಮ್ಮತಿ ನೀಡಿದ್ದು, ಮಾ.15 ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಇದರಿಂದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಕೆಲವೇ ದಿನಗಳ ಹಿಂದಷ್ಟೇ ಹೈಕೋರ್ಟ್​ನಲ್ಲಿ ರಿಲೀಫ್ ಸಿಕ್ಕಿತ್ತು. ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು.

ಅದರೆ, ಮತ್ತೆ ಪ್ರಕ್ರಿಯೆ ನಡೆಸಲು ಹೈಕೋರ್ಟ್ ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News